This page features a video of the poem “ಹಕ್ಕಿ ಹಾರುತಿದೆ ನೋಡಿದಿರಾ (Hakki Harutide Nodidira)”, prescribed under the Karnataka State Syllabus for 10th Standard Kannada First Language. Along with its summary in three languages and transliterated songs. It serves as a valuable learning resource for students and parents, with each song accompanied by its respective lyrics for easy sing-along. The synchronized lyrics help learners follow and recite the song as it progresses, making memorization and learning by heart easier, more effective, and enjoyable.
Lyrics
Kannada
ಇರುಳಿರುಳಳಿದು ದಿನ ದಿನ ಬೆಳಗೆ
ಸುತ್ತಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದೆ
ಎವೆತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ?
ಕರಿನರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣ-ಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ?
ನೀಲಮೇಘಮಂಡಲ-ಸಮ ಬಣ್ಣ
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ
ಚಿಕ್ಕೆಯಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ?
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ?
ಯುಗ-ಯುಗಗಳ ಹಣೆ ಬರೆಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ?
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳಿನೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳ ಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ?
ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೋ
ಬಲ್ಲರು ಯಾರಾ ಹಾಕಿದ ಹೊಂಚ!
ಹಕ್ಕಿ ಹಾರುತಿದೆ ನೋಡಿದಿರಾ?
ಸುತ್ತಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದೆ
ಎವೆತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ?
ಕರಿನರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣ-ಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ?
ನೀಲಮೇಘಮಂಡಲ-ಸಮ ಬಣ್ಣ
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ
ಚಿಕ್ಕೆಯಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ?
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ?
ಯುಗ-ಯುಗಗಳ ಹಣೆ ಬರೆಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ?
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳಿನೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳ ಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ?
ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೋ
ಬಲ್ಲರು ಯಾರಾ ಹಾಕಿದ ಹೊಂಚ!
ಹಕ್ಕಿ ಹಾರುತಿದೆ ನೋಡಿದಿರಾ?
Summary
ಈ ಕವಿತೆ ದಿನದ ಬದಲಾಗುವ ಬೆಳಕಿನ ನಡುವೆ ಎತ್ತರಕ್ಕೂ ದೂರಕ್ಕೂ ಹಾರುವ ಒಂದು ಅದ್ಭುತ ಹಕ್ಕಿಯನ್ನು ಚಿತ್ರಿಸುತ್ತದೆ. ಅದರ ರೆಕ್ಕೆಗಳಲ್ಲಿ ಅನೇಕ ಬಣ್ಣಗಳಿದ್ದು, ಅದರ ಸೌಂದರ್ಯವನ್ನು ಮೋಡ, ಸೂರ್ಯ ಮತ್ತು ಚಂದ್ರರೊಂದಿಗೆ ಹೋಲಿಸಲಾಗಿದೆ. ಅದು ರಾಜ್ಯಗಳು, ಸಾಮ್ರಾಜ್ಯಗಳು, ಮಂಡಲಗಳು ಮತ್ತು ಗಡಿಗಳನ್ನು ದಾಟಿ ಲೋಕದ ವಿಭಜನೆಗಳಿಗಿಂತ ಮೇಲಕ್ಕೆ ಏರುವ ಶಕ್ತಿಯ ಸಂಕೇತವಾಗಿ ಕಾಣುತ್ತದೆ. ತನ್ನ ರೆಕ್ಕೆಗಳ ಬೀಸುವಿಕೆಯಿಂದ ಯುಗಗಳ ಹಣೆಬರಹವನ್ನು ಅಳಿಸಿ ಹೊಸ ಕಾಲದ ಪೀಳಿಗೆಗೆ ಚೇತನ ನೀಡುತ್ತದೆ. ಕೊನೆಯಲ್ಲಿ ಅದು ದಿಗ್ಮಂಡಲಗಳ ಅಂಚನ್ನು ಮುಟ್ಟಿ ತನ್ನ ಚುಂಚವನ್ನು ಆಚೆಗೆ ಚಾಚುತ್ತದೆ ಮತ್ತು ಅದರ ಮುಂದಿನ ಮಹತ್ತರ ಗುರಿ ಏನು ಎಂಬುದನ್ನು ರಹಸ್ಯವಾಗಿಯೇ ಬಿಡುತ್ತದೆ.
Author
ದ. ರಾ. ಬೇಂದ್ರೆ.