ವೀರಲವ

This page features a video of the poem “ವೀರಲವ (Viralava)”, prescribed under the Karnataka State Syllabus for 10th Standard Kannada First Language. Along with its summary in three languages and transliterated songs. It serves as a valuable learning resource for students and parents, with each song accompanied by its respective lyrics for easy sing-along. The synchronized lyrics help learners follow and recite the song as it progresses, making memorization and learning by heart easier, more effective, and enjoyable.
Lyrics Kannada
ಬಲ್ಗಯ್ಯ ನೃಪರಂಜಿ ತಡೆಯದೆ ರಘೂದ್ವಹನ |
ಸೊಲ್ಗೇಳಿ ನಮಿಸಲಿಳೆಯೊಳ್ ಚರಿಸುತಧ್ವರದ |
ನಲ್ಗುದುರೆ ಬಂದು ವಾಲ್ಮೀಕಿಯ ನಿಜಾಶ್ರಮದ ವಿನಿಯೋಗದುಪವನದೊಳು ||
ಪುಲ್ಗಳ ಪಸುರ್ಗೆಳಸಿ ಪೊಕ್ಕೊಡಾ ತೋಟಗಾ |
ವಲ್ಗೆ ತನ್ನೊಡನಾಡಿಗಳ ಕೂಡಿ ಲೀಲೆ ಮಿಗೆ |
ಬಿಲ್ಗೊಂಡು ನಡೆತಂದವಂ ಕಂಡನರ್ಚಿತ ಸುವಾಜಿಯಂ ವೀರಲವನು

ಎತ್ತಣ ತುರಂಗಮಿದು ಪೆÀÇಕ್ಕು ಪೂದೋಟಮಂ |
ತೊತ್ತಳದುಳಿದುದು ವಾಲ್ಮೀಕಿ ಮುನಿನಾಥನೇ |
ಪೊತ್ತುಮಾರೈವುದೆಂದೆನಗೆ ನೇಮಿಸಿ ಪೋದನಬ್ಧಿಪಂ ಕರೆಸಲಾಗಿ ||
ಮತ್ತೆ ವರುಣನ ಲೋಕದಿಂ ಬಂದು ಮುಳಿದಪನೆ
ನುತ್ತ ಹಯದೆಡೆಗೆ ನಡೆತಂದು ನೋಡಲ್ಕದರ |
ನೆತ್ತಿಯೊಳ್ ಮೆರೆವ ಪಟ್ಟದ ಲಿಖಿತಮಂ ಕಂಡು ಲವನೋದಿಕೊಳುತಿರ್ದನು

ಉರ್ವಿಯೊಳ್ ಕೌಸಲ್ಯೆ ಪಡೆದ ಕುವರಂ ರಾಮ |
ನೊರ್ವನೇ ವೀರನಾತನ ಯಜ್ಞತುರಗಮಿದು |
ನಿರ್ವಹಿಸಲಾರ್ಪರಾರಾದೊಡಂ ತಡೆಯಲೆಂದಿರ್ದ ಲೇಖನವನೋದಿ ||
ಗರ್ವಮಂ ಬಿಡಿಸದಿರ್ದೊಡೆ ತನ್ನ ಮಾತೆಯಂ |
ಸರ್ವಜನಮುಂ ಬಂಜೆಯೆನ್ನದಿರ್ದಪುದೆ ತನ |
ಗುರ್ವತೋಳ್ಗಳಿವೇತಕೆಂದು ಸಲೆ ವಾಸಿಯಂ ತೊಟ್ಟು ಲವನುರಿದೆದ್ದನು

ತೆಗೆದುತ್ತರೀಯಮಂ ಮುರಿದು ಕುದುರೆಯ ಗಳಕೆ |
ಬಿಗಿದು ಕದಳೀದ್ರುಮಕೆ ಕಟ್ಟಲ್ಕೆ ಮುನಿಸುತರ್ |
ಮಿಗೆ ನಡುಗಿ ಬೇಡಬೇಡರಸುಗಳ ವಾಜಿಯಂ ಬಿಡು ಬಡಿವರೆಮ್ಮನೆನಲು ||
ನಗುತೆ ಪಾರ್ವರ ಮಕ್ಕಳಂಜಿದೊಡೆ ಜಾನಕಿಯ |
ಮಗನಿದಕೆ ಬೆದರುವನೆ ಪೋಗಿ ನೀವೆಂದು ಲವ |
ನಗಡುತನದಿಂದೆ ಬಿಲ್ದಿರುವನೇರಿಸಿ ತೀಡಿ ಜೇಗೈದು ನಿಂತಿರ್ದನು
Summary
ಈ ಪದ್ಯಭಾಗವು ರಾಮನ ಯಜ್ಞದ ಕುದುರೆಗೆ ಸಂಬಂಧಿಸಿದ ಲವ-ಕುಶರ ಕಥೆಯ ಒಂದು ಪ್ರಸಂಗವನ್ನು ಹೇಳುತ್ತದೆ. ಲವನು ಆಶ್ರಮದ ಪ್ರದೇಶಕ್ಕೆ ಬಂದ ರಾಜಕುದುರೆಯನ್ನು ನೋಡಿ ಅದರ ನೆತ್ತಿಯ ಮೇಲಿನ ಬರಹದಿಂದ ಅದು ರಾಮನ ಯಜ್ಞದ ಕುದುರೆ ಎಂದು ತಿಳಿದುಕೊಳ್ಳುತ್ತಾನೆ. ಅದನ್ನು ಯಾರೂ ತಡೆಯಬಾರದು ಎಂಬ ಸೂಚನೆ ಇದ್ದರೂ ಲವನು ರಾಜಾಧಿಕಾರವನ್ನು ಪ್ರಶ್ನಿಸದೆ ಒಪ್ಪಿಕೊಳ್ಳುವುದಿಲ್ಲ ಮತ್ತು ಕುದುರೆಯನ್ನು ತಡೆದು ಮರಕ್ಕೆ ಕಟ್ಟುತ್ತಾನೆ. ಅವನ ಸುತ್ತಲಿರುವವರು ಭಯ ಮತ್ತು ಆಶ್ಚರ್ಯದಿಂದ ಪ್ರತಿಕ್ರಿಯಿಸಿದರೂ ಲವನು ತನ್ನ ನಿರ್ಧಾರದಲ್ಲಿ ದೃಢವಾಗಿ ನಿಂತಿರುತ್ತಾನೆ. ಈ ಪ್ರಸಂಗವು ಯುವ ಲವನ ಧೈರ್ಯ ಮತ್ತು ಸ್ವತಂತ್ರ ಮನೋಭಾವವನ್ನು ತೋರಿಸಿ ಮುಂದೆ ನಡೆಯುವ ದೊಡ್ಡ ಸಂಘರ್ಷಕ್ಕೆ ಮುನ್ನುಡಿ ಬರೆಯುತ್ತದೆ.
Author
ಕವಿ: ಜನಪದ