This page features a video of the poem “ತಿರುಕನ ಕನಸು (Tirukana Kanasu)”, prescribed under the Karnataka State Syllabus for 7th Standard Kannada First Language. Along with its summary in three languages and transliterated songs. It serves as a valuable learning resource for students and parents, with each song accompanied by its respective lyrics for easy sing-along. The synchronized lyrics help learners follow and recite the song as it progresses, making memorization and learning by heart easier, more effective, and enjoyable.
Lyrics
Kannada
ತಿರುಕನೊರ್ವನೂರ ಮುಂದೆ
ಮುರುಕುಧರ್ಮ ಶಾಲೆಯಲ್ಲಿ
ಒರಗಿರುತ್ತಲೊಂದು ಕನಸ ಕಂಡನೆಂತೆನೆ
ಪುರದ ರಾಜ ಸತ್ತನವಗೆ
ವರಕುಮಾರರಿಲ್ಲದಿರಲು
ಕರಿಯ ಕೈಗೆ ಕುಸುಮಮಾಲೆಯಿತ್ತು ಮುರದೊಳು
ನಡೆದು ಯಾರ ಕೊರಳಿನಲ್ಲಿ
ತೊಡರಿಸುವುದೊ ಅವರ ಪಟ್ಟ
ಕೊಡೆಯರನು ಮಾಳ್ವೆವೆಂದು ಬಿಟ್ಟರಲ್ಲಿಯೆ
ಒಡನೆ ತನ್ನ ಕೊರಳಿನಲ್ಲಿ
ತೊಡರಿಸಲ್ಕೆ ಕಂಡು ತಿರುಕ
ಪೊಡವಿಯಾಣ್ಮದೆನೆಂದು ಹಿಗ್ಗುತಿರ್ದನು
ಪಟ್ಟವನ್ನು ಕಟ್ಟಿ ನೃಪರು
ಕೊಟ್ಟರವಗೆ ಕನೈಯರನು
ನೆಟ್ಟನವನು ರಾಜ್ಯವಾಳ್ದ ಕನಸಿನಲ್ಲಿಯೇ
ಭಟ್ಟನಿಗಳ ಕೂಡಿ ನಲ್ಲ
ನಿಷ್ಟಸುಖದೊಳಿರಲವಂಗೆ
ಹುಟ್ಟಿ ಹೆಣ್ಣು ಗಂಡು ಮಕ್ಕಳಾದುವಾಗಲೇ
ಓಲಗದಲಿರುತ್ತ ತೊಡೆಯ
ಮೇಲೆ ಮಕ್ಕಳಾಡುತಿರಲು
ಲೀಲೆಯಿಂದ ಚಾತುರಂಗ ಬಲವ ನೋಡುತ
ಲೋಲವಾಗಿ ನುಡಿದನಿನಿತು
ಕೇಳು ಮಂತ್ರಿ, ಸುತರುಗಳಿಗೆ
ಬಾಲೆಯರನು ನೋಡಿ ಮದುವೆ ಮಾಡಬೇಕಲೆ
ನೋಡಿ ಬನ್ನಿರೆನಲು ಜೀಯ
ನೋಡಿ ಬಂದೆವೆನಲು ಬೇಗ ಮಾಡು
ಮದುವೆ ಮಂಟಪದೊಳು ಸಕಲ ಕಾರ್ಯವ
ಗಾಢವಾಗೆ ಸಂಭ್ರಮಗಳು
ಮಾಡುತಿದ್ದ ಮದುವೆಗಳನು
ಕೂಡಿದಖಿಳ ರಾಯರೆಲ್ಲ ಮೆಚ್ಚುವಂದದಿ
ಧನದ ಮದವು ರಾಜ್ಯ ಮದವು
ತನುಜ ಮದವು ಯುವತಿ ಮದವು
ಜನಿತವಾಗಿ ಕನಸಿನಲ್ಲಿ ಹಿಗ್ಗುತಿರ್ದನು
ಅನಿತರೊಳಗೆ ನೃಪರ ದಂಡು
ಮನೆಯ ಮುತ್ತಿದಂತೆಯಾಗೆ
ಕನಸ ಕಾಣುತಿರ್ದು ಹೆದರಿ ಕಣ್ಣ ತೆರೆದನು.
ಮುರುಕುಧರ್ಮ ಶಾಲೆಯಲ್ಲಿ
ಒರಗಿರುತ್ತಲೊಂದು ಕನಸ ಕಂಡನೆಂತೆನೆ
ಪುರದ ರಾಜ ಸತ್ತನವಗೆ
ವರಕುಮಾರರಿಲ್ಲದಿರಲು
ಕರಿಯ ಕೈಗೆ ಕುಸುಮಮಾಲೆಯಿತ್ತು ಮುರದೊಳು
ನಡೆದು ಯಾರ ಕೊರಳಿನಲ್ಲಿ
ತೊಡರಿಸುವುದೊ ಅವರ ಪಟ್ಟ
ಕೊಡೆಯರನು ಮಾಳ್ವೆವೆಂದು ಬಿಟ್ಟರಲ್ಲಿಯೆ
ಒಡನೆ ತನ್ನ ಕೊರಳಿನಲ್ಲಿ
ತೊಡರಿಸಲ್ಕೆ ಕಂಡು ತಿರುಕ
ಪೊಡವಿಯಾಣ್ಮದೆನೆಂದು ಹಿಗ್ಗುತಿರ್ದನು
ಪಟ್ಟವನ್ನು ಕಟ್ಟಿ ನೃಪರು
ಕೊಟ್ಟರವಗೆ ಕನೈಯರನು
ನೆಟ್ಟನವನು ರಾಜ್ಯವಾಳ್ದ ಕನಸಿನಲ್ಲಿಯೇ
ಭಟ್ಟನಿಗಳ ಕೂಡಿ ನಲ್ಲ
ನಿಷ್ಟಸುಖದೊಳಿರಲವಂಗೆ
ಹುಟ್ಟಿ ಹೆಣ್ಣು ಗಂಡು ಮಕ್ಕಳಾದುವಾಗಲೇ
ಓಲಗದಲಿರುತ್ತ ತೊಡೆಯ
ಮೇಲೆ ಮಕ್ಕಳಾಡುತಿರಲು
ಲೀಲೆಯಿಂದ ಚಾತುರಂಗ ಬಲವ ನೋಡುತ
ಲೋಲವಾಗಿ ನುಡಿದನಿನಿತು
ಕೇಳು ಮಂತ್ರಿ, ಸುತರುಗಳಿಗೆ
ಬಾಲೆಯರನು ನೋಡಿ ಮದುವೆ ಮಾಡಬೇಕಲೆ
ನೋಡಿ ಬನ್ನಿರೆನಲು ಜೀಯ
ನೋಡಿ ಬಂದೆವೆನಲು ಬೇಗ ಮಾಡು
ಮದುವೆ ಮಂಟಪದೊಳು ಸಕಲ ಕಾರ್ಯವ
ಗಾಢವಾಗೆ ಸಂಭ್ರಮಗಳು
ಮಾಡುತಿದ್ದ ಮದುವೆಗಳನು
ಕೂಡಿದಖಿಳ ರಾಯರೆಲ್ಲ ಮೆಚ್ಚುವಂದದಿ
ಧನದ ಮದವು ರಾಜ್ಯ ಮದವು
ತನುಜ ಮದವು ಯುವತಿ ಮದವು
ಜನಿತವಾಗಿ ಕನಸಿನಲ್ಲಿ ಹಿಗ್ಗುತಿರ್ದನು
ಅನಿತರೊಳಗೆ ನೃಪರ ದಂಡು
ಮನೆಯ ಮುತ್ತಿದಂತೆಯಾಗೆ
ಕನಸ ಕಾಣುತಿರ್ದು ಹೆದರಿ ಕಣ್ಣ ತೆರೆದನು.
Summary
ಈ ಕವನವು ಒಬ್ಬ ಬಡ ತಿರುಕನಿಗೆ ಬಂದ ಕನಸಿನ ಮೂಲಕ ಅಧಿಕಾರ, ಐಶ್ವರ್ಯ ಮತ್ತು ಸುಖದ ಅನಿತ್ಯತೆಯನ್ನು ತೋರಿಸುತ್ತದೆ. ತಿರುಕನು ರಾಜನಾಗಿ ಪಟ್ಟವನ್ನು ಧರಿಸಿ, ರಾಜ್ಯವನ್ನು ಆಳುತ್ತಾ ಕುಟುಂಬ ಮತ್ತು ವೈಭವದ ಜೀವನ ನಡೆಸುವ ಕನಸು ಕಾಣುತ್ತಾನೆ. ಕನಸಿನಲ್ಲಿ ಅವನಿಗೆ ಅಪಾರ ಧನ, ಅಧಿಕಾರ, ಮಕ್ಕಳು ಮತ್ತು ಮದುವೆಯ ಸಂಭ್ರಮ ದೊರೆತಂತೆ ಕಾಣುತ್ತದೆ. ಆದರೆ ಕೊನೆಯಲ್ಲಿ ರಾಜರ ದಂಡು ತನ್ನ ಮನೆಗೆ ಮುತ್ತಿದ ದೃಶ್ಯ ಕಂಡು ಭಯಗೊಂಡು ಅವನು ಎಚ್ಚರಗೊಳ್ಳುತ್ತಾನೆ. ಈ ಕಥೆ ಕನಸಿನ ವೈಭವವು ಕ್ಷಣಿಕವಾಗಿದ್ದು, ಜೀವನದಲ್ಲಿ ಅತಿಯಾದ ಧನ ಮತ್ತು ಅಧಿಕಾರದ ಮದಕ್ಕೆ ಒಳಗಾಗಬಾರದು ಎಂಬ ಬೋಧನೆಯನ್ನು ನೀಡುತ್ತದೆ.
Author
ಮುಪ್ಪಿನ ಷಡಕ್ಷರಿ