This page features a video of the poem “ರಾಮಧಾನ್ಯ ಚರಿತೆ (Ramadhanya Charite)”, prescribed under the Karnataka State Syllabus for 8th Standard Kannada First Language. Along with its summary in three languages and transliterated songs. It serves as a valuable learning resource for students and parents, with each song accompanied by its respective lyrics for easy sing-along. The synchronized lyrics help learners follow and recite the song as it progresses, making memorization and learning by heart easier, more effective, and enjoyable.
Lyrics
Kannada
ಕೆಲರು ಗೋದಿಯ ಸಾಮೆಯನು ಕೆಲ
ಕೆಲರು ನವಣೆಯ ಕಂಬು ಜೋಳವ
ಕೆಲರು ಹಾರಕವೆಂದು ಕೆಲವರು ನೆಲ್ಲನತಿಶಯವ
ಕೆಲರು ನರೆದಲೆಗನನು ಪತಿಕರಿ
ಸಲದ ನೋಡಿದ ನೃಪತಿಯದರೊಳು
ಹಲವು ಮತವೇಕೊಂದನೇ ಪೇಳೆನಲು ಗೌತಮನು.
ದಾಶರಥಿ ಚಿಥೈಸು ನಮ್ಮಯ
ದೇಶಕತಿಶಯ ನರೆದಲೆಗನೇ
ವಾಸಿಯುಳ್ಳವನೀತ ಮಿಕ್ಕಿನ ಧಾನ್ಯವೇಕೆನಲು
ಲೇಸನಾಡಿದೆ ಮುನಿಪ ಗೌತಮ
ದೋಷರಹಿತನು ಪಕ್ಷಪಾತವ
ನೀಸು ಪರಿಯಲಿ ಮಾಡುವರೆ ಶಿವಯೆಂದನಾವ್ರಿಹಿಗ
ಎಲ್ಲ ಧರ್ಮದ ಸಾರವನು ನೀವ್
ಬಲ್ಲಿರರಿಯಿರೆ ಎಲ್ಲರನು ನೀ
ವಿಲ್ಲಿ ನುಡಿವ ಉಪೇಕ್ಷೆಯುಂಟೇ ಸಾಕದಂತಿರಲಿ
ನೆಲ್ಲು ನಾನಿರೆ ಗೋದಿ ಮೊದಲಾ
ದೆಲ್ಲ ಧಾನ್ಯಗಳಿರಲು ಇದರಲಿ
ಬಲ್ಲಿದನು ನರೆದಲೆಗನೆಂಬುದಿದಾವ ಮತವೆಂದ
ಏನೆಲವೊ ನರೆದಲಗ ನೀನು ಸ
ಮಾನನೇ ಎನಗಿಲ್ಲಿ ನಮ್ಮನು
ದಾನವಾಂತಕ ಬಲ್ಲನಿಬ್ಬರ ಹೆಚ್ಚು ಕುಂದುಗಳ
ಜಾನಕೀ ಪತಿ ಸನಿಹದಲಿ ಕುಲ
ಹೀನ ನೀನು ಪ್ರತಿಷ್ಠ ಸುಡು ಮತಿ
ಹೀನ ನೀನೆಂದೆನುತ ಖತಿಯಲಿ ಬೈದು ಭಂಗಿಸಿದ
ಕ್ಷಿತಿಯಮರರುಪನಯನದಲಿ ಸು
ವ್ರತ ಸುಭೋಜನ ಪರಮ ಮಂತ್ರಾ
ಕ್ಷತೆಗಳಲಿ ಶುಭಶೋಭನದಲಾರತಿಗೆ ಹಿರಿಯರಲಿ
ಕ್ರತುಗಳೆಡೆಯೊಳಗರಮನೆಯಲಿ
ಪ್ರತಿದಿನವು ರಂಜಿಸುತ ದೇವರಿ
ಗತಿಶಯದ ನೈವೇದ್ಯ ತಾನಿಹೆನೆಂದನಾ ವ್ರಿಹಿಗ
ಸತ್ಯಹೀನನು ಬಡವರನು ಕ
ಣ್ಣೆತ್ತಿನೋಡೆ ಧನಾಢ್ಯರನು ಬೆಂ
ಬತ್ತಿ ನಡೆವ ಅಪೇಕ್ಷೆ ನಿನ್ನದು ಹೇಳಲೇನದನು
ಹೆತ್ತ ಬಾಣಂತಿಯರು ರೋಗಿಗೆ
ಪತ್ಯ ನೀನಹೆ ಹೆಣದ ಬಾಯಿಗೆ
ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕರವೆಂದ
ಮಳೆದೆಗೆದು ಬೆಳೆಯಡಗಿ ಕ್ಷಾಮದ
ವಿಲಯಕಾಲದೊಳನ್ನವಿಲ್ಲದೆ
ಅಳಿವ ಪ್ರಾಣಿಗಳಾದರಿಸಿ ಸಲಹುವೆನು ಜಗವರಿಯೆ
ಎಲವೊ ನೀನೆಲ್ಲಿಹೆಯೊ ನಿನ್ನಯ
ಬಳಗವದು ತಾನೆಲ್ಲಿಹುದು ಈ
ಹಲವು ಹುಲು ಧಾನ್ಯಗಳೆನಗೆ ಸರಿದೊರೆಯೆ ಕೇಳೆಂದ
ಮಸೆದುದಿತ್ತಂಡಕ್ಕೆ ಮತ್ಸರ
ಪಿಸುಣ ಬಲರತಿ ನಿಷ್ಠುರರು ವಾ
ದಿಸಲು ಕಂಡನು ನೃಪತಿ ಮನದಲಿ ನೋಡಿ ನಸುನಗುತ
ಹಿಸುಣರಿವದಿರ ಮತ್ಸರವ ಮಾ
ಣಿಸುವ ಹದನೇನೆನುತ ಯೋಚಿಸಿ
ದ ಸುರ ಮುನಿಪರ ನೋಡೆ ಗೌತಮ ಮುನಿಪನಿಂತೆಂದ
ಅರಸುಗಳು ನಾವೆಲ್ಲ ಭೂಮೀ
ಸುರರು ನೆರೆದಿಹ ದಾನವರು ವಾ
ನರರು ನಮಗೀ ನ್ಯಾಯವನು ಪರಿಹರಿಸಲಳವಲ್ಲ
ಕರೆÀಸುವೆವು ಹರಿಹರವಿರಂಚಾ
ದ್ಯರನಯೋಧ್ಯೆಗೆ ಅವರ ಗುಣವಾ
ಧರಿಸಿ ಪೇಳ್ವರು ನಯದೊಳೆಂದನು ರಾಮ ನಸುನಗುತ
ಪರಮ ಧಾನ್ಯದೊಳಿಬ್ಬರೇ ಇವ
ರಿರಲಿ ಸೆರೆಯೊಳಗಾರು ತಿಂಗಳು
ಹಿರಿದು ಕಿರಿದೆಂಬಿವರ ಪೌರುಷವರಿಯಬಹುದಿನ್ನು
ಪುರಕೆ ಗಮನಿಸಿ ನಾವು ನಿಮ್ಮನು
ಕರೆಸುವೆವು ಕೇಳೆನುತಯೋಧ್ಯಾ
ಪುರಿಗೆ ಪಯಣವ ಮಾಡಹೇಳಿದನಾ ವಿಭೀಷಣಗೆ
ಕೆಲರು ನವಣೆಯ ಕಂಬು ಜೋಳವ
ಕೆಲರು ಹಾರಕವೆಂದು ಕೆಲವರು ನೆಲ್ಲನತಿಶಯವ
ಕೆಲರು ನರೆದಲೆಗನನು ಪತಿಕರಿ
ಸಲದ ನೋಡಿದ ನೃಪತಿಯದರೊಳು
ಹಲವು ಮತವೇಕೊಂದನೇ ಪೇಳೆನಲು ಗೌತಮನು.
ದಾಶರಥಿ ಚಿಥೈಸು ನಮ್ಮಯ
ದೇಶಕತಿಶಯ ನರೆದಲೆಗನೇ
ವಾಸಿಯುಳ್ಳವನೀತ ಮಿಕ್ಕಿನ ಧಾನ್ಯವೇಕೆನಲು
ಲೇಸನಾಡಿದೆ ಮುನಿಪ ಗೌತಮ
ದೋಷರಹಿತನು ಪಕ್ಷಪಾತವ
ನೀಸು ಪರಿಯಲಿ ಮಾಡುವರೆ ಶಿವಯೆಂದನಾವ್ರಿಹಿಗ
ಎಲ್ಲ ಧರ್ಮದ ಸಾರವನು ನೀವ್
ಬಲ್ಲಿರರಿಯಿರೆ ಎಲ್ಲರನು ನೀ
ವಿಲ್ಲಿ ನುಡಿವ ಉಪೇಕ್ಷೆಯುಂಟೇ ಸಾಕದಂತಿರಲಿ
ನೆಲ್ಲು ನಾನಿರೆ ಗೋದಿ ಮೊದಲಾ
ದೆಲ್ಲ ಧಾನ್ಯಗಳಿರಲು ಇದರಲಿ
ಬಲ್ಲಿದನು ನರೆದಲೆಗನೆಂಬುದಿದಾವ ಮತವೆಂದ
ಏನೆಲವೊ ನರೆದಲಗ ನೀನು ಸ
ಮಾನನೇ ಎನಗಿಲ್ಲಿ ನಮ್ಮನು
ದಾನವಾಂತಕ ಬಲ್ಲನಿಬ್ಬರ ಹೆಚ್ಚು ಕುಂದುಗಳ
ಜಾನಕೀ ಪತಿ ಸನಿಹದಲಿ ಕುಲ
ಹೀನ ನೀನು ಪ್ರತಿಷ್ಠ ಸುಡು ಮತಿ
ಹೀನ ನೀನೆಂದೆನುತ ಖತಿಯಲಿ ಬೈದು ಭಂಗಿಸಿದ
ಕ್ಷಿತಿಯಮರರುಪನಯನದಲಿ ಸು
ವ್ರತ ಸುಭೋಜನ ಪರಮ ಮಂತ್ರಾ
ಕ್ಷತೆಗಳಲಿ ಶುಭಶೋಭನದಲಾರತಿಗೆ ಹಿರಿಯರಲಿ
ಕ್ರತುಗಳೆಡೆಯೊಳಗರಮನೆಯಲಿ
ಪ್ರತಿದಿನವು ರಂಜಿಸುತ ದೇವರಿ
ಗತಿಶಯದ ನೈವೇದ್ಯ ತಾನಿಹೆನೆಂದನಾ ವ್ರಿಹಿಗ
ಸತ್ಯಹೀನನು ಬಡವರನು ಕ
ಣ್ಣೆತ್ತಿನೋಡೆ ಧನಾಢ್ಯರನು ಬೆಂ
ಬತ್ತಿ ನಡೆವ ಅಪೇಕ್ಷೆ ನಿನ್ನದು ಹೇಳಲೇನದನು
ಹೆತ್ತ ಬಾಣಂತಿಯರು ರೋಗಿಗೆ
ಪತ್ಯ ನೀನಹೆ ಹೆಣದ ಬಾಯಿಗೆ
ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕರವೆಂದ
ಮಳೆದೆಗೆದು ಬೆಳೆಯಡಗಿ ಕ್ಷಾಮದ
ವಿಲಯಕಾಲದೊಳನ್ನವಿಲ್ಲದೆ
ಅಳಿವ ಪ್ರಾಣಿಗಳಾದರಿಸಿ ಸಲಹುವೆನು ಜಗವರಿಯೆ
ಎಲವೊ ನೀನೆಲ್ಲಿಹೆಯೊ ನಿನ್ನಯ
ಬಳಗವದು ತಾನೆಲ್ಲಿಹುದು ಈ
ಹಲವು ಹುಲು ಧಾನ್ಯಗಳೆನಗೆ ಸರಿದೊರೆಯೆ ಕೇಳೆಂದ
ಮಸೆದುದಿತ್ತಂಡಕ್ಕೆ ಮತ್ಸರ
ಪಿಸುಣ ಬಲರತಿ ನಿಷ್ಠುರರು ವಾ
ದಿಸಲು ಕಂಡನು ನೃಪತಿ ಮನದಲಿ ನೋಡಿ ನಸುನಗುತ
ಹಿಸುಣರಿವದಿರ ಮತ್ಸರವ ಮಾ
ಣಿಸುವ ಹದನೇನೆನುತ ಯೋಚಿಸಿ
ದ ಸುರ ಮುನಿಪರ ನೋಡೆ ಗೌತಮ ಮುನಿಪನಿಂತೆಂದ
ಅರಸುಗಳು ನಾವೆಲ್ಲ ಭೂಮೀ
ಸುರರು ನೆರೆದಿಹ ದಾನವರು ವಾ
ನರರು ನಮಗೀ ನ್ಯಾಯವನು ಪರಿಹರಿಸಲಳವಲ್ಲ
ಕರೆÀಸುವೆವು ಹರಿಹರವಿರಂಚಾ
ದ್ಯರನಯೋಧ್ಯೆಗೆ ಅವರ ಗುಣವಾ
ಧರಿಸಿ ಪೇಳ್ವರು ನಯದೊಳೆಂದನು ರಾಮ ನಸುನಗುತ
ಪರಮ ಧಾನ್ಯದೊಳಿಬ್ಬರೇ ಇವ
ರಿರಲಿ ಸೆರೆಯೊಳಗಾರು ತಿಂಗಳು
ಹಿರಿದು ಕಿರಿದೆಂಬಿವರ ಪೌರುಷವರಿಯಬಹುದಿನ್ನು
ಪುರಕೆ ಗಮನಿಸಿ ನಾವು ನಿಮ್ಮನು
ಕರೆಸುವೆವು ಕೇಳೆನುತಯೋಧ್ಯಾ
ಪುರಿಗೆ ಪಯಣವ ಮಾಡಹೇಳಿದನಾ ವಿಭೀಷಣಗೆ
Summary
ಈ ಕವನವು ಧಾನ್ಯಗಳ ಉದಾಹರಣೆಯ ಮೂಲಕ ಸಮಾನತೆ, ಪಕ್ಷಪಾತ ಮತ್ತು ನ್ಯಾಯದ ವಿಚಾರವನ್ನು ಚರ್ಚಿಸುತ್ತದೆ. ವಿವಿಧ ಧಾನ್ಯಗಳಲ್ಲಿ ಯಾವುದು ಶ್ರೇಷ್ಠ ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾದಾಗ ಗೌತಮನು ಎಲ್ಲ ಧಾನ್ಯಗಳಿಗೂ ತಮ್ಮದೇ ಆದ ಉಪಯೋಗವಿದೆ ಎಂದು ತಿಳಿಸುತ್ತಾನೆ. ಮನುಷ್ಯರಲ್ಲಿಯೂ ಜನ್ಮ, ಸ್ಥಾನ ಅಥವಾ ಸಂಪತ್ತಿನ ಆಧಾರದ ಮೇಲೆ ಮೇಲುಕೀಳು ಮಾಡುವುದು ಸರಿಯಲ್ಲ ಎಂಬ ಸಂದೇಶವು ಇದರೊಳಗೆ ಅಡಗಿದೆ. ಬರಗಾಲದ ಸಮಯದಲ್ಲಿ ಸಣ್ಣ ಧಾನ್ಯಗಳೂ ಜೀವಿಗಳನ್ನು ಉಳಿಸಬಲ್ಲವು ಎಂಬುದನ್ನು ಕವನವು ಉದಾಹರಣೆಯಾಗಿ ನೀಡುತ್ತದೆ. ಆದ್ದರಿಂದ ಯಾವುದೇ ವ್ಯಕ್ತಿ ಅಥವಾ ವಸ್ತುವನ್ನು ಪಕ್ಷಪಾತದಿಂದ ಅಳೆಯದೆ ಅದರ ನಿಜವಾದ ಮೌಲ್ಯ ಮತ್ತು ಉಪಯೋಗವನ್ನು ಗೌರವಿಸಬೇಕು ಎಂಬುದು ಕವನದ ಮುಖ್ಯ ಆಶಯವಾಗಿದೆ.
Author
ಚೆನ್ನವೀರಕಣವಿ