This page features a video of the poem “ನನ್ನ ಹಾಗೆಯೆ (Nanna Hageye)”, prescribed under the Karnataka State Syllabus for 8th Standard Kannada Second Language. Along with its summary in three languages and transliterated songs. It serves as a valuable learning resource for students and parents, with each song accompanied by its respective lyrics for easy sing-along. The synchronized lyrics help learners follow and recite the song as it progresses, making memorization and learning by heart easier, more effective, and enjoyable.
Lyrics
Kannada
ಮೊನ್ನೆ ಮೊನ್ನೆ ನಡೆಯಿತಲ್ಲ ಬಾಹುಬಲಿಯ ಮಜ್ಜನ
ಬೆಟ್ಟದಲ್ಲಿ ಕೇಳಿತೊಂದು ಪುಟ್ಟ ಮಗುವು ಅಜ್ಜನ
“ಈತನಾರು ತಾತ ಇಲ್ಲಿ ನಿಂತು ನೋಡುತಿರುವನು
ಇಂದ್ರಗಿರಿಯ ನೆತ್ತಿಯಲ್ಲಿ ಏನು ಮಾಡುತಿರುವನು?”
“ಇವನೆ ಬಾಹುಬಲಿಯು ಮಗು! ಧೀರತನದ ಮೂರ್ತಿಯು!
ನುಡಿಯ ಹೊಳೆಗಳಲ್ಲಿ ತುಂಬಿ ಹರಿವುದಿವನ ಕೀರ್ತಿಯು
ಹತ್ತುವವರ ಇಳಿಯುವವರ ನಿಂತು ನೋಡುತಿರುವನು
ನಿಲ್ಲುವವರ ನಡೆಯುವವರ ಲೆಕ್ಕ ಮಾಡುತಿರುವನು
ಬಳಲಿದವರಿಗೆಲ್ಲ ಇಲ್ಲಿ ಕೈಯ ನೀಡುತಿರುವನು”
“ಇಲ್ಲಿ ಏಕೆ ಬಂದು ನಿಂತ? ಇಷ್ಟು ದೂರ! ಎತ್ತರ!
ಭಯವಾಗದೆ ಇವನಿಗಿಲ್ಲಿ ಯಾರು ಇಲ್ಲ ಹತ್ತಿರ”
“ಇವನಿಗೆಲ್ಲಿ ಭಯವು ಮಗು ಅಭಯಮೂರ್ತಿ ಈತನು
ಭರತ ಚಕ್ರವರ್ತಿ ಇವನ ಅಣ್ಣ ಒಮ್ಮೆ ಆತನು
ಹಮ್ಮಿನಲ್ಲಿ ಬಂದು ಸೆಣಸಿ ತಮ್ಮನಲ್ಲಿ ಸೋತನು
ಗೆದ್ದರಾಜ್ಯ ಮರಳಿಸುತ್ತ ನುಡಿದನೊಂದು ಮಾತನು
ನೀನು ಸೋತುಗೆದ್ದೆ ಅಣ್ಣ, ನಾನು ಗೆದ್ದು ಸೋತೆನು
ಬೆಟ್ಟ ಕರೆಯುತಿಹುದು ನನ್ನ ಮುಗಿಲು ತನ್ನ ಹತ್ತಿರ
ಯಾವುದುಂಟು ಅಣ್ಣ ಇಲ್ಲಿ ಜೀವವೇರದೆತ್ತರ?
ತಪಸ್ಸೊಂದೆ ತಿಳಿವುದೊಂದೆ ಹುಟ್ಟು ಸಾವಿನುತ್ತರ.
ನಿಂತು ಹಾಗೆ ನಿಂತುಕೊಂಡು ಘೋರ ತಪವ ಮಾಡಲು
ಹುಟ್ಟು ಸಾವಿನಾಚೆಗಿರುವ ಹೊಳೆವ ಹಾದಿ ನೋಡಲು
ಬಿಸಿಲು ಬಂತು ನೆರಳು ಬಂತು ಗಾಳಿ ಬಿಚ್ಚಿ ಬೀಸಿತು
ಒಮ್ಮೆ ಹಸಿರು ಒಮ್ಮೆ ಹೊನ್ನು ಹಚ್ಚಡವನು ಹಾಸಿತು
ಸೂರ್ಯನೊಮ್ಮೆ ಚಂದ್ರನೊಮ್ಮೆ ಸುತ್ತು ಹಾಕಿ ನಡೆದರು
ದೀಪದಂತೆ ನಿಂತ ಇವಗೆ “ನಮೋ” ಎಂದು ನುಡಿದರು
“ಇಷ್ಟು ಜನರು ಇಲ್ಲಿಗಿಂದು ಏಕೆ ಬಂದು ನೆರೆದರು?
‘ಬಾಹುಬಲಿ’, ‘ಬಾಹುಬಲಿ’ ಎಂದು ಕರೆಯುತಿರುವರು”
“ಮಗೂ, ಇಂದು ಇವನಿಗಿಲ್ಲಿ ಹಾಲಿನಲ್ಲಿ ಸ್ನಾನವು
ದಾರಿಯಲ್ಲಿ ದಣಿದ ಇವರಿಗೆ, ಇವನದೊಂದೆ ಧ್ಯಾನವು
ತರಗತಿಯಲ್ಲಿ ಕಲಿತದ್ದನ್ನು ಸಮಾಜದ ಒಳಿತಿಗೆ ಬಳಸದವ ವಿದ್ಯಾವಂತನೇ ಅಲ್ಲ.
ಮುದ್ದುಮುಖದಿ ಮುಗುಳ್ನಕ್ಕು ಸಿದ್ಧನಾಗಿ ನಿಂತಿಹ
ದುಗ್ಧ ಹಾಸದಲ್ಲಿ ನಲಿವ ಮುಗ್ಧ ಮಗುವಿನಂತಿಹ”
“ತಾತ, ಎರೆವ ಮುಂಚೆ ಎಣ್ಣೆ ಹಚ್ಚಿ ಅಮ್ಮ ನನಗೆ ಹೀಗೆಯೇ
ನಿಲ್ಲಿಸುವಳು. ಬಾಹುಬಲಿಯು ಕೂಡ ತನ್ನ ಹಾಗೆಯೆ
ನಿಂತು ಕಾಯುತಿರುವ ಕಣ್ಣು ತೆರೆದು ಮೊದಲ ಚೆಂಬಿಗೆ”
ಗೊಮ್ಮಟೇಶ ನಕ್ಕುಬಿಟ್ಟ ಕಂಡು ಮುಗ್ಧ ನಂಬಿಗೆ
ಬೆಟ್ಟದಲ್ಲಿ ಕೇಳಿತೊಂದು ಪುಟ್ಟ ಮಗುವು ಅಜ್ಜನ
“ಈತನಾರು ತಾತ ಇಲ್ಲಿ ನಿಂತು ನೋಡುತಿರುವನು
ಇಂದ್ರಗಿರಿಯ ನೆತ್ತಿಯಲ್ಲಿ ಏನು ಮಾಡುತಿರುವನು?”
“ಇವನೆ ಬಾಹುಬಲಿಯು ಮಗು! ಧೀರತನದ ಮೂರ್ತಿಯು!
ನುಡಿಯ ಹೊಳೆಗಳಲ್ಲಿ ತುಂಬಿ ಹರಿವುದಿವನ ಕೀರ್ತಿಯು
ಹತ್ತುವವರ ಇಳಿಯುವವರ ನಿಂತು ನೋಡುತಿರುವನು
ನಿಲ್ಲುವವರ ನಡೆಯುವವರ ಲೆಕ್ಕ ಮಾಡುತಿರುವನು
ಬಳಲಿದವರಿಗೆಲ್ಲ ಇಲ್ಲಿ ಕೈಯ ನೀಡುತಿರುವನು”
“ಇಲ್ಲಿ ಏಕೆ ಬಂದು ನಿಂತ? ಇಷ್ಟು ದೂರ! ಎತ್ತರ!
ಭಯವಾಗದೆ ಇವನಿಗಿಲ್ಲಿ ಯಾರು ಇಲ್ಲ ಹತ್ತಿರ”
“ಇವನಿಗೆಲ್ಲಿ ಭಯವು ಮಗು ಅಭಯಮೂರ್ತಿ ಈತನು
ಭರತ ಚಕ್ರವರ್ತಿ ಇವನ ಅಣ್ಣ ಒಮ್ಮೆ ಆತನು
ಹಮ್ಮಿನಲ್ಲಿ ಬಂದು ಸೆಣಸಿ ತಮ್ಮನಲ್ಲಿ ಸೋತನು
ಗೆದ್ದರಾಜ್ಯ ಮರಳಿಸುತ್ತ ನುಡಿದನೊಂದು ಮಾತನು
ನೀನು ಸೋತುಗೆದ್ದೆ ಅಣ್ಣ, ನಾನು ಗೆದ್ದು ಸೋತೆನು
ಬೆಟ್ಟ ಕರೆಯುತಿಹುದು ನನ್ನ ಮುಗಿಲು ತನ್ನ ಹತ್ತಿರ
ಯಾವುದುಂಟು ಅಣ್ಣ ಇಲ್ಲಿ ಜೀವವೇರದೆತ್ತರ?
ತಪಸ್ಸೊಂದೆ ತಿಳಿವುದೊಂದೆ ಹುಟ್ಟು ಸಾವಿನುತ್ತರ.
ನಿಂತು ಹಾಗೆ ನಿಂತುಕೊಂಡು ಘೋರ ತಪವ ಮಾಡಲು
ಹುಟ್ಟು ಸಾವಿನಾಚೆಗಿರುವ ಹೊಳೆವ ಹಾದಿ ನೋಡಲು
ಬಿಸಿಲು ಬಂತು ನೆರಳು ಬಂತು ಗಾಳಿ ಬಿಚ್ಚಿ ಬೀಸಿತು
ಒಮ್ಮೆ ಹಸಿರು ಒಮ್ಮೆ ಹೊನ್ನು ಹಚ್ಚಡವನು ಹಾಸಿತು
ಸೂರ್ಯನೊಮ್ಮೆ ಚಂದ್ರನೊಮ್ಮೆ ಸುತ್ತು ಹಾಕಿ ನಡೆದರು
ದೀಪದಂತೆ ನಿಂತ ಇವಗೆ “ನಮೋ” ಎಂದು ನುಡಿದರು
“ಇಷ್ಟು ಜನರು ಇಲ್ಲಿಗಿಂದು ಏಕೆ ಬಂದು ನೆರೆದರು?
‘ಬಾಹುಬಲಿ’, ‘ಬಾಹುಬಲಿ’ ಎಂದು ಕರೆಯುತಿರುವರು”
“ಮಗೂ, ಇಂದು ಇವನಿಗಿಲ್ಲಿ ಹಾಲಿನಲ್ಲಿ ಸ್ನಾನವು
ದಾರಿಯಲ್ಲಿ ದಣಿದ ಇವರಿಗೆ, ಇವನದೊಂದೆ ಧ್ಯಾನವು
ತರಗತಿಯಲ್ಲಿ ಕಲಿತದ್ದನ್ನು ಸಮಾಜದ ಒಳಿತಿಗೆ ಬಳಸದವ ವಿದ್ಯಾವಂತನೇ ಅಲ್ಲ.
ಮುದ್ದುಮುಖದಿ ಮುಗುಳ್ನಕ್ಕು ಸಿದ್ಧನಾಗಿ ನಿಂತಿಹ
ದುಗ್ಧ ಹಾಸದಲ್ಲಿ ನಲಿವ ಮುಗ್ಧ ಮಗುವಿನಂತಿಹ”
“ತಾತ, ಎರೆವ ಮುಂಚೆ ಎಣ್ಣೆ ಹಚ್ಚಿ ಅಮ್ಮ ನನಗೆ ಹೀಗೆಯೇ
ನಿಲ್ಲಿಸುವಳು. ಬಾಹುಬಲಿಯು ಕೂಡ ತನ್ನ ಹಾಗೆಯೆ
ನಿಂತು ಕಾಯುತಿರುವ ಕಣ್ಣು ತೆರೆದು ಮೊದಲ ಚೆಂಬಿಗೆ”
ಗೊಮ್ಮಟೇಶ ನಕ್ಕುಬಿಟ್ಟ ಕಂಡು ಮುಗ್ಧ ನಂಬಿಗೆ
Summary
ಈ ಕವಿತೆ ಒಂದು ಮಗು ಮತ್ತು ಅಜ್ಜನ ಸಂಭಾಷಣೆಯ ಮೂಲಕ ಬಾಹುಬಲಿಯ ಕಥೆಯನ್ನು ವಿವರಿಸುತ್ತದೆ. ಬಾಹುಬಲಿಯು ಧೀರತನದ ಮೂರ್ತಿಯಾಗಿದ್ದು ಬೆಟ್ಟದ ಮೇಲೆ ಘೋರ ತಪಸ್ಸಿನಲ್ಲಿ ನಿಂತಿದ್ದನೆಂದು ಅಜ್ಜನು ವಿವರಿಸುತ್ತಾನೆ. ಭರತ ಚಕ್ರವರ್ತಿಯನ್ನು ಸೋಲಿಸಿದ ನಂತರ ಗೆದ್ದ ರಾಜ್ಯವನ್ನು ಮರಳಿಸಿ ತಪಸ್ಸು ಮತ್ತು ಆತ್ಮಜ್ಞಾನದ ಮಾರ್ಗವನ್ನು ಬಾಹುಬಲಿ ಆರಿಸಿಕೊಂಡನು. ಬಿಸಿಲು, ಗಾಳಿ ಮತ್ತು ಬದಲಾಗುವ ಋತುಗಳ ನಡುವೆಯೂ ಅವನು ಜನ್ಮ ಮತ್ತು ಮರಣದಾಚೆಯ ಸತ್ಯವನ್ನು ಅರಿಯಲು ಸ್ಥಿರನಾಗಿ ನಿಂತನು. ಕೊನೆಯಲ್ಲಿ ಗೊಮ್ಮಟೇಶನ ಅಭಿಷೇಕಕ್ಕಾಗಿ ಜನರು ಸೇರಿರುವ ದೃಶ್ಯವನ್ನು ಮತ್ತು ಅದನ್ನು ಮುಗ್ಧತೆಯಿಂದ ನೋಡುವ ಮಗುವಿನ ಅನುಭವವನ್ನು ಕವಿತೆ ಚಿತ್ರಿಸುತ್ತದೆ.
Author
ಸು. ರಂ. ಎಕ್ಕುಂಡಿ