ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು

This page features a video of the poem “ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು (Ninna Muttina Sattigeyanittu Salahu)”, prescribed under the Karnataka State Syllabus for 9th Standard Kannada First Language. Along with its summary in three languages and transliterated songs. It serves as a valuable learning resource for students and parents, with each song accompanied by its respective lyrics for easy sing-along. The synchronized lyrics help learners follow and recite the song as it progresses, making memorization and learning by heart easier, more effective, and enjoyable.
Lyrics Kannada
ಸಂದ ಕಾರಿರುಳು ಕನ್ನೆಯರು ಹಗಲಂ ನೋಡ
ಲೆಂದು ಬಂದರೊ ಸುರಾಸುರರಬುಧಿಯಂ ಮಥಿಸು
ವಂದು ಹೊಸ ವಿಷದ ಹೊಗೆ ಹೊಯ್ದು ಕಗ್ಗನೆ ಕಂದಿ ಜಲದೇವಿಯರು ಮನದಲಿ
ನೊಂದು ಮಾನಿಸರಾದರೋ ಕಮಲಜಂ ನೀಲ
ದಿಂದ ಮಾಡಿದ ಸಾಲಭಂಜಿಕೆಗಳೊದವಿ ಜೀ
ವಂದಳೆದವೋ ಎನಿಪ್ಪಂದದಿಂ ಬಂದರಂಗನೆಯರವನೀಶನೆಡೆಗೆ

ಮಾಯದಬಲೆಯರು ಕಾಣುತ್ತ ಮಝ ಭಾಪದಟ
ರಾಯ ಮಝರೇ ರಾಯ ರಾಯದಳವುಳಕಾ¾
ರಾಯಕಂಟಕ ರಾಯಜಗಜಟ್ಟಿ ರಾಯದಲ್ಲಣ ರಾಯಕೋಳಾಹಳ
ರಾಯಭುಜಬಲಭೀಮ ರಾಯಮರ್ಧನ ರಾಯ
ಜೀಯ ಸ್ಥಿರಂಜೀವಯೆಂದು ಕೀರ್ತಿಸಿ ಗಾಣ
ನಾಯಕಿಯರೊಲಿದು ದಂಡಿಗೆವಿಡಿದು ಪೊಡಮಟ್ಟು ಹಾಡಲುದ್ಯೋಗಿಸಿದರು

ಎಕ್ಕಲವ ಬಳಿಬಿಡಿದು ಸುತ್ತಿದಾಸ¾ನು ಮುನಿ
ರಕ್ಕಸನ ಬನಕೆ ಬಂದಂಜಿಕೆಯನೆರಡನೆಯ
ಮುಕ್ಕಣ್ಣನೆನಿಪ ಗುರುವಾಜ್ಞೆಗೆಟ್ಟಳಲನಲ್ಲದೆ ಕನಸ ಕಂಡ ಭಯವ
ಮಿಕ್ಕು ಮಱಿವಂತಡಸಿ ಕವಿವ ಗತಿಗಳ ಸೊಗಸ
ನಕ್ಕಿಸದೆ ಸಮಯೋಚಿತದ ಪಸಾಯಕ್ಕೆ ಮನ
ವುಕ್ಕಿ ಸರ್ವಾಭರಣಮಂ ಗಾಣರಾಣಿಯರಿಗಿತ್ತನು ಹರಿಶ್ಚಂದ್ರನು

ಬಡತನದ ಹೊತ್ತಾನೆ ದೊರಕಿ ಫಲವೇನು ನೀ
ರಡಸಿರ್ದ ಹೊತ್ತಾಜ್ಯ ದೊರಕಿ ಫಲವೇನು ರುಜೆ
ಯಡಸಿ ಕೆಡೆದಿಹ ಹೊತ್ತು ರಂಭೆ ದೊರೆಕೊಂಡಲ್ಲಿ ಫಲವೇನು ಸಾವ ಹೊತ್ತು
ಪೊಡವಿಯೊಡೆತನ ದೊರಕಿ ಫಲವೇನು ಕಡುವಿಸಿಲು
ಹೊಡೆದು ಬೆಂಡಾಗಿ ಬೀಳ್ವೆಮಗೆ ನೀನೊಲಿದು ಮಣಿ
ದೊಡಿಗೆಗಳನಿತ್ತು ಫಲವೇನು ಭೂಪಾಲ ಹೇಳೆನುತ ಮತ್ತಿಂತೆಂದರು

ಕಡಲೊಳಾಳ್ವಂಗೆ ತೆಪ್ಪವನು ದಾರಿದ್ರಂಗೆ
ಕಡವರವನತಿರೋಗಿಗಮೃತಮಂ ಕೊಟ್ಟಡವ
ರಡಿಗಡಿಗದಾವ ಹರುಷವನೆಯ್ದು ತಿಪ್ಪರವರಂ ಪೋಲ್ವರೀ ಪೊತ್ತಿನ
ಸುಡುಸುಡುನೆ ಸುಡುವ ಬಿಱುಬಿಸಿಲ ಸೆಕೆಯುಸುರ ಬಿಸಿ
ಹೊಡೆದುದುರಿಹತ್ತಿ ಬಾಯ್ ಬತ್ತಿ ಡಗೆ ಸುತ್ತಿ ಸಾ
ವಡಸುತಿದೆ ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು ಭೂಭುಜಯೆಂದರು

ರವಿಕುಲದ ಪೀಳಿಗೆಯೊಳೊಗೆದ ರಾಯರ್ಗೆ ಪ
ಟ್ಟವ ಕಟ್ಟುವಂದಿದಿಲ್ಲದಡರಸುತನ ಸಲ್ಲ
ದವನಿಯೊಳು ಯುದ್ಧರಂಗದೊಳಿದಂ ಕಂಡ ಹಗೆಗಳು ನಿಲ್ಲರಿದ¾ ಕೆಳಗೆ
ಕವಿವ ನೆಳಲೊಳಗಾವನಿರ್ದನಾತಂಗೆ ತಾಂ
ತವಿಲೆಡರು ಬಡತನಂ ರೋಗವಪಕೀರ್ತಿ ಪರಿ
ಭವ ಭಯಂ ಹರೆವುದಿದನಱಿದಱಿದು ಸತ್ತಿಗೆಯ ಕೊಡಬಹುದೆ ಹೇಳೆಂದನು

ಅನುನಯದೊಳೆಲ್ಲವಂ ಕೊಡಬಹುದು ಬಿಡಬಹುದು
ಜನನಿಯಂ ಜನಕನಂ ನಲ್ಲಳಂ ದೈವವಂ
ಮನವಾರೆ ನಂಬಿ ನಚ್ಚಿರ್ದ ಪರಿವಾರಮಂ ಕೊಡುವ ಬಿಡುವತಿಕಲಿಗಳು
ಜನರೊಳಗೆ ಜನಿಸರೆಂದೆನಲು ನೀನೀಗ ಪೇ
ಳ್ದನಿತಱೊಳು ಬೇಡಿದಡೆ ಕೊಡಬೇಡ ಕೊಡೆಯನೀ
ಯೆನೆ ಲೋಭವೇಕರಸ ಎನಲಿದಲ್ಲದೆ ಬೇಱೆ ಮಾತೆಪಿತರಿಲ್ಲೆಂದನು

ಲೋಗರಿಗೆ ಕೊಡಬಾರದಾಗಿ ಸತಿ ವಂಶಗತ
ವಾಗಿ ಬಂದುದಱಿಂದ ತಂದೆ ಪಟ್ಟವ ಕಟ್ಟು
ವಾಗಲರ್ಚಿಸಿಕೊಂಬುದಾಗಿ ದೈವಂ ನೆಳಲ ತಂಪನೊಸೆದೀವುದಾಗಿ
ಸಾಗಿಸುವ ತಾಯ್ ಧುರದೊಳರಿಗಳಂ ನಡುಗಿಸುವು
ದಾಗಿ ಚತುರಂಗಬಲವೆನಿಸಿತೀ ಛತ್ರವೆಂ
ಬಾಗಳಿದನಱಿದಱಿದು ಬೇಡುವರನತಿಮರುಳರೆನ್ನರೇ ಮೂಜಗದೊಳು
Summary
ಈ ಕಾವ್ಯಭಾಗವು ಹರಿಶ್ಚಂದ್ರನ ಸತ್ಯನಿಷ್ಠೆ, ತ್ಯಾಗ ಮತ್ತು ಕಷ್ಟಸಹನೆಯನ್ನು ವಿವರಿಸುತ್ತದೆ. ಅನೇಕ ಸಂಕಷ್ಟಗಳ ನಡುವೆ ರಾಜ್ಯ, ಸಂಪತ್ತು ಮತ್ತು ಸುಖಗಳನ್ನು ಪಡೆಯುವ ಅವಕಾಶಗಳು ಬಂದರೂ ಅವನು ತನ್ನ ಸತ್ಯ ಮತ್ತು ಧರ್ಮದಿಂದ ಹಿಂದೆ ಸರಿಯುವುದಿಲ್ಲ. ದಾರಿದ್ರ್ಯ, ರೋಗ, ಅಪಕೀರ್ತಿ ಮತ್ತು ಕಠಿಣ ಪರಿಸ್ಥಿತಿಗಳನ್ನೂ ಸಹಿಸಿಕೊಂಡು ತನ್ನ ವಚನವನ್ನು ಉಳಿಸಿಕೊಳ್ಳಲು ಸಿದ್ಧನಾಗಿರುತ್ತಾನೆ. ಕುಟುಂಬ, ರಾಜ್ಯ ಮತ್ತು ವೈಯಕ್ತಿಕ ಸುಖಗಳಿಗಿಂತ ಸತ್ಯ ಮತ್ತು ಕರ್ತವ್ಯಕ್ಕೆ ಹೆಚ್ಚಿನ ಮೌಲ್ಯ ನೀಡುತ್ತಾನೆ. ಸತ್ಯಕ್ಕಾಗಿ ತ್ಯಾಗ ಮಾಡುವ ಧೈರ್ಯ ಮತ್ತು ಲೋಭವನ್ನು ತಿರಸ್ಕರಿಸುವ ನಿಷ್ಠೆಯೇ ಈ ಭಾಗದ ಪ್ರಮುಖ ಸಂದೇಶವಾಗಿದೆ.
Author
ಕವಿ: ರಾಘವಾಂಕ